ಹುಬ್ಬಳ್ಳಿ : ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಈಗಾಗಲೇ ನಟ-ನಟಿಯರು ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಅವರ ಮಾತಿಗೆ ಧ್ವನಿಗೂಡಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ಸುದೀಪ್ ಹೇಳಿದ್ದು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ. ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. ಅದನ್ನೇ ಸುದೀಪ್ ಹೇಳಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ನಟ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.










