ನೇಣು ಬಿಗಿದುಕೊಂಡು ಸೂಪರ್ ವೈಸರ್ ಆತ್ಮಹತ್ಯೆ…

103
firstsuddi

ಚಿಕ್ಕಮಗಳೂರು: ಬೆಳಗಾವಿ ಮೂಲದ ಸೂಪರ್ ವೈಸರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಲಾಡ್ಜ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಬಸವರಾಜ್ ಲಿಂಗಪ್ಪ (47) ಎಂದು ಗುರುತಿಸಲಾಗಿದೆ. ಲಾಡ್ಜ್ ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಲಿಂಗಪ್ಪ ಅವರು ಒಬ್ಬ ಗುತ್ತಿಗೆದಾರನ ಬಳಿ ಕೆಲಸ ಮಾಡುತ್ತಿದ್ದರು. ಅವರು ಕಳೆದ 10 ದಿನಗಳಿಂದ ಬಾಳೆಹೊನ್ನೂರಿನಲ್ಲಿ ಕೆಲಸ ಮಾಡುತ್ತಿದ್ದರು. ಆರು ವರ್ಷದ ಕೆಲಸದ ಸಂಬಳ ನೀಡದ ಕಾರಣ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೂ ಮುನ್ನ ಲಿಂಗಪ್ಪ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಪೊಲೀಸರು ಮೃತ ಲಿಂಗಪ್ಪ ಅವರ ಕುಟುಂಬಸ್ಥರಿಗಾಗಿ ಕಾಯುತ್ತಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.