ಬಿಜೆಪಿ ಸೇರ್ಪಡೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು ಗೊತ್ತಾ?

65
firstsuddi

ಮಂಡ್ಯ : ನಾನು ಬಿಜೆಪಿ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಈ ಬಗ್ಗೆ ಜನಾಭಿಪ್ರಾಯ ಸಂಗ್ರಹ ಮಾಡುತ್ತಿದ್ದೇನೆ. ಆ ಬಳಿಕ ನಿರ್ಧರಿಸಲಾಗುವುದು ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಕಳೆದ ಎರಡು ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ, ಈಗ ಸಂಸದರ ನಿಧಿ ಬಿಡುಗಡೆಯಾಗಿದೆ. ಮುಖಂಡರು ಹಿಂದೆ ನಿಧಿ ಬಗ್ಗೆ ಕೇಳಿದ್ರು. ಈ ಬಗ್ಗೆ ಪ್ರಸ್ತಾಪ ಮಾಡಲು ಅವರನ್ನು ಸಭೆ ಕರೆದಿದ್ದೇನೆ ಹೊರತು ಬಿಜೆಪಿ ಸೇರುವ ಬಗ್ಗೆ ಅಲ್ಲ ಎಂದು ತಿಳಿಸಿದರು.

ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ರೆ ಅದು ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ. ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಯಾವ ಪಕ್ಷ ಸೇರುವ ಅವಶ್ಯಕತೆ ಇಲ್ಲ. ಜನರು ಏನು ಹೇಳಿದ್ದಾರೋ ಅದನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ. ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ನಾನು ಏನು ಹೇಳಲ್ಲ, ಎಲ್ಲರೂ ಸ್ವತಂತ್ರರು ಯಾವ ಪಕ್ಷಕ್ಕಾದ್ರು ಸೇರಬಹುದು ಎಂದು ಸುಮಲತಾ ಹೇಳಿದ್ದಾರೆ.

ಪುತ್ರ ಅಭಿಷೇಕ್ ಚುನಾವಣೆ ಸ್ಪರ್ಧಿಸುತ್ತಾನೋ ಇಲ್ಲವೋ ಎನ್ನುವುದು ಆತನಿಗೆ ಬಿಟ್ಟ ವಿಚಾರ. ಸಿನಿಮಾಗೆ ಬಾ ಎಂದು ನಾವು ಹೇಳಿಲ್ಲ. ರಾಜಕೀಯ ಬಗ್ಗೆನೂ ನಾವು ಹೇಳಲ್ಲ ಎಂದರು.