ವಂಚನೆ ಆರೋಪ ; ಕಿರುತೆರೆ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ…

78
firstsuddi

ಬೆಂಗಳೂರು : ಕನ್ನಡ ಕಿರುತೆರೆ ಮತ್ತು ಹಿರಿತೆರೆ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ವಂಚನೆ ಆರೋಪದಡಿ ನಗರದ ವೈಯ್ಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.

2018ರಲ್ಲಿ ‘ಕಮಲಿ’ ಧಾರವಾಹಿ ನಿರ್ಮಾಣಕ್ಕೆ ಕಿರುತೆರೆ ನಿರ್ಮಾಪಕ ರೋಹಿತ್ ಎಂಬುವವರು 73 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಧಾರವಾಹಿ ತೆರೆಕಂಡ ನಂತರ ಹಣ ಹಿಂತಿರುಗಿಸದೇ ಮತ್ತು ಲಾಭಾಂಶ ನೀಡದೇ ವಂಚಸಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕೌಶಿಕ್ ವಿರುದ್ಧ ನಿರ್ಮಾಪಕ ರೋಹಿತ್ ವೈಯ್ಯಾಲಿಕಾವಲ್ ಠಾಣೆಗೆ ದೂರು ನೀಡಿದ್ದರು. ಈ ದೂರಿಗೆ ಸಂಬಂಧ ಪಟ್ಟಂತೆ ಇದೀಗ ಪೊಲೀಸರು ನಿರ್ದೇಶಕ ಅರವಿಂದ್ ಅವರನ್ನು ಬಂಧಿಸಿದ್ದಾರೆ.

28 ಮೇ 2018 ರಿಂದ ‘ಕಮಲಿ’ ಧಾರಾವಾಹಿ ಶುರುವಾಯಿತು. ಮೊದ ಮೊದಲು ಧಾರಾವಾಹಿಯಲ್ಲಿ ನಿರ್ಮಾಪಕರು ರೋಹಿತ್ ಎಂದು ತೋರಿಸಲಾಗುತ್ತಿತ್ತು. ಆ ನಂತರ ನನ್ನ ಹೆಸರನ್ನೇ ಕಿತ್ತು ಹಾಕಲಾಯಿತು. ಅಷ್ಟರಲ್ಲಿ ನಾನು ಆ ಧಾರಾವಾಹಿಗಾಗಿ 73 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದೆ. ನನ್ನ ಹೆಸರು ತಗೆದು ಹಾಕಿದ್ದಕ್ಕೆ ಕೇಳಿದೆ. ಅದಕ್ಕೆ ಅವರು ಸಕಾರಣ ಕೊಡಲಿಲ್ಲ. ಈವರೆಗೂ ಲಾಭಾಂಶದಲ್ಲಿ ಒಂದು ಪೈಸೆಯನ್ನೂ ನನಗೆ ಕೊಟ್ಟಿಲ್ಲ. ಹಣ ಕೇಳಿದರೆ ಕೊಡುತ್ತಿಲ್ಲ. ಹೀಗಾಗಿ ನನಗೆ ವಂಚನೆ ಆಗಿದೆ ಎಂದು ರೋಹಿತ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.