ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬೇಡಿ : ಅಧಿಕಾರಿಗಳಿಗೆ ಗೋವಿಂದ ಕಾರಜೋಳ ಸೂಚನೆ…

69
firstsuddi

ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಎಚ್ಚೆತ್ತುಕೊಂಡಿರುವ ಸಚಿವ ಗೋವಿಂದ ಕಾರಜೋಳ ಅವರು, ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬಾರದು. ಸರ್ಕಾರದ ಯೋಜನೆ ಮಂಜೂರಾಗದೇ ಯಾರಾದರೂ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒಗಳು, ಇಒಗಳು, ಇಂಜಿನಿಯರ್ಗಳೇ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ನಿಮ್ಮ ಮನೆಯಲ್ಲಿ ಯಾರಾದರೂ ಹೇಳದೇ ಕೆಲಸ ಮಾಡೋಕೆ ಬಂದ್ರೆ ಸುಮ್ಮನೇ ಇರ್ತೀರಾ?. ಯಾವುದೇ ಕಾರಣಕ್ಕೂ ಅನಧಿಕೃತ ವ್ಯಕ್ತಿಗಳು ನಮ್ಮ ವ್ಯಾಪ್ತಿಯಲ್ಲಿ ಬರಬಾರದು. ಗ್ರಾಮ ಪಂಚಾಯತ್ ನಲ್ಲಿ ಯಾರಾದರೂ ಬಂದು ಕೆಲಸ ಮಾಡ್ತಾರೆ ಅಂದ್ರೆ ಬಿಡಬಾರದು. ಒಂದು ವೇಳೆ ಬಿಟ್ಟಿದ್ದೆ ಆದ್ರೆ, ಸುಮ್ಮನೇ ಅಧಿಕಾರಿಗಳಿಗೂ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು. ವಿನಾಕಾರಣ ಅಪಪ್ರಚಾರ ಆಗುತ್ತದೆ. ಒಂದು ವೇಳೆ ಯಾರಾದರೂ ಪುಂಡಾಟಿಕೆ ಮಾಡಿದರೆ ಪೊಲೀಸರಿಗೆ ದೂರು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.