ಮಹಿಳೆಯರೊಂದಿಗೆ ಅಸಭ್ಯ ವರ್ತನೆ : ಆರೋಪಿ ಬಂಧನ…

77
firstsuddi

ಮಂಗಳೂರು : ಪ್ರಾರ್ಥನಾ ಮಂದಿರದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ (26) ಎಂಬಾತ ಬಂಧಿತ ಆರೋಪಿ. ತೊಕ್ಕೊಟ್ಟುವಿನ ಹುದಾ ಜುಮಾ ಮಸೀದಿಯಲ್ಲಿ ಏ.28ರಂದು ರಾತ್ರಿ ರಂಜಾನ್ ಪ್ರಯುಕ್ತ ‘ಲೈಲತುಲ್ ಖದರ್’ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಹಿಳೆಯರು, ಹೆಣ್ಣು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಆರೋಪಿ ಸುಜಿತ್ ಅಕ್ರಮವಾಗಿ ಪ್ರವೇಶಿಸಿ, ಮಹಿಳೆಯರನ್ನು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ.

ಈ ಬಗ್ಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮೂವರು ಮಹಿಳೆಯರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.