ಬಸವ ಜಯಂತಿ, ರಂಜಾನ್ : ಜನತೆಗೆ ಶುಭ ಕೋರಿದ ಸಿಎಂ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ.

81
firstsuddi

ಬೆಂಗಳೂರು : ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು. ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, “ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ – ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ, ಇದೇ ಕೂಡಲಸಂಗನನೊಲಿಸುವ ಪರಿ ಎಂದು ವಚನದ ಮೂಲಕ ಶುಭಾಶಯ ಕೋರಿದ್ದಾರೆ. ಅದೇ ರೀತಿ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್-ಉಲ್-ಫಿತರ್ (ಪವಿತ್ರ ರಂಜಾನ್) ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.