ಉಕ್ರೇನ್‍ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಸಿದ್ದಲಿಂಗ ಶ್ರೀಗಳ ನಿರ್ಧಾರ…

73
firstsuddi

ತುಮಕೂರು : ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಿಂದಾಗಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಉಕ್ರೇನ್‍ನಿಂದ ಮರಳಿ ತಾಯ್ನಾಡಿಗೆ ಬಂದಿರುವ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ನೆರವಿಗೆ ಜಿಲ್ಲೆಯ ಸಿದ್ದಗಂಗಾ ಮಠ ಮುಂದೆ ಬಂದಿದೆ. ಉಕ್ರೇನ್‍ನಿಂದ ಹಿಂತಿರುಗಿದ ರಾಜ್ಯದ ಮೆಡಿಕಲ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಲು ಸಿದ್ದಗಂಗಾ ಮಠಾಧೀಶ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ನಿರ್ಧರಿಸಿದ್ದಾರೆ.

ಸಿದ್ದಗಂಗಾ ಮಠ ನಡೆಸುತ್ತಿರುವ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಶಿಕ್ಷಣ ನೀಡಲು ಶ್ರೀಗಳು ನಿರ್ಧರಿಸಿದ್ದಾರೆ. ಉಕ್ರೇನ್ ನಲ್ಲಿ ಓದುತ್ತಿದ್ದ 13 ವಿದ್ಯಾರ್ಥಿಗಳಿಗೆ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಶಿಕ್ಷಣ ನೀಡಲು ಸ್ವಾಮೀಜಿ ನಿರ್ಧರಿಸಿದ್ದಾರೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಶ್ರೀಗಳು ಹೇಳಿದ್ದಾರೆ. ಜೊತೆಗೆ ಎಷ್ಟೇ ವಿದ್ಯಾರ್ಥಿಗಳು ಬಂದರೂ ಶಿಕ್ಷಣ ಕೊಡುವುದಾಗಿ ಮಾಹಿತಿ ನೀಡಿದ್ದಾರೆ.