ಬೆಂಗಳೂರು : 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭಾರೀ ಅಕ್ರಮದಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳು, ಸಚಿವರುಗಳು, ಪೊಲೀಸ್ ಅಧಿಕಾರಿಗಳ ಹೆಸರುಗಳು ಕೇಳಿಬರುತ್ತಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗಿದ್ದರು ಎಂಬ ಶಂಕೆ ಹಿನ್ನೆಲೆಯಲ್ಲಿ ಡಿವೈಎಸ್ ಪಿ ಶಾಂತರಾಜು ಅವರನ್ನು ಸಿಐಡಿ ಅಧಿಕಾರಿಗಳು ಕರೆದು ವಿಚಾರಣೆ ನಡೆಸಿದ್ದಾರೆ. ಹಗರಣ ಹೊರಬರುತ್ತಿದ್ದಂತೆ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.
ಡಿವೈಎಸ್ ಪಿ ಶಾಂತರಾಜು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಕಾಂಗ್ರೆಸ್ ನಾಯಕರ ಆರೋಪದ ನಂತರ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರ ವರ್ಗಾವಣೆಯಾಗಿತ್ತು.










