ರಾಯಚೂರು : ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿ ಕೆಲಸದಿಂದ ವಜಾಗೊಂಡಿದ್ದ ಬಿಎಂಟಿಸಿ ನೌಕರ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ನಡೆದಿದೆ.
ವಿನೋದ್ ಕುಮಾರ್ ಪತ್ರಿ (42) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮನೆಯಲ್ಲಿ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಎಂಟಿಸಿಯಲ್ಲಿ ಚಾಲಕ ಹಾಗೂ ನಿರ್ವಾಹಕನಾಗಿದ್ದ ವಿನೋದ್ ಕಳೆದ ವರ್ಷ ಕೆಲಸದಿಂದ ವಜಾಗೊಂಡ ಹಿನ್ನೆಲೆ ಮಾನಸಿಕವಾಗಿ ಕುಗ್ಗಿದ್ದು, ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.
ಕಳೆದ ವರ್ಷ ನಡೆಸಿದ್ದ ಸಾರಿಗೆ ಇಲಾಖೆಯ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕೆ ವಿನೋದ್ ಕುಮಾರ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಘಟನೆ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










