ವಿಜ್ಞಾನ ಸುಳ್ಳು ಹೇಳುವುದಿಲ್ಲ, ಮೋದಿ ಹೇಳ್ತಾರೆ: ರಾಹುಲ್ ಗಾಂಧಿ.

53
firstsuddi

ನವದೆಹಲಿ : ವಿಜ್ಞಾನ ಸುಳ್ಳು ಹೇಳುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಹೇಳ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕೋವಿಡ್ ನಿಂದಾಗಿ ಭಾರತದಲ್ಲಿ 47 ಲಕ್ಷ ಜನರು ಸಾವನ್ನಪ್ಪಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಬಿಡುಗಡೆ ಮಾಡಿತ್ತು. ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೋವಿಡ್ ಸಾಂಕ್ರಾಮಿಕ ರೋಗದಿಂದ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರ ಹೇಳಿಕೊಂಡಂತೆ 4.8 ಲಕ್ಷ ಮಂದಿ ಸಾವನ್ನಪ್ಪಿಲ್ಲ. ವಿಜ್ಞಾನ ಸುಳ್ಳು ಹೇಳಲ್ಲ, ಮೋದಿ ಹೇಳ್ತಾರೆ. ಪ್ರೀತಿ ಪಾತ್ರರನ್ನು ಕಳೆದುಕೊಂಡವರನ್ನು ಗೌರವಿಸಿ, ಅವರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.