ಕೋಲಾರ : ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಮಾಲೂರು ಮಾಜಿ ಶಾಸಕ ಮಂಜುನಾಥಗೌಡ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೋಲಾರ ಸಂಸದ ಎಸ್.ಮುನಿಸ್ವಾಮಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.










