ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಮೋಹನ್ ಜುನೇಜ.

69
firstsuddi

ಬೆಂಗಳೂರು : ಅನಾರೋಗ್ಯದಿಂದ ನಿಧನರಾದ ಕನ್ನಡ ಚಿತ್ರರಂಗದ ಹಾಸ್ಯ ಕಲಾವಿದ ಮೋಹನ್ ಜುನೇಜ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರನ್ನು ಪ್ರೇರಣೆಯಾಗಿ ತಗೆದುಕೊಂಡಿದ್ದ ಇವರು, ನೇತ್ರದಾನಕ್ಕೆ ಒಲವು ತೋರಿದ್ದರಂತೆ. ಹಾಗಾಗಿ ಮೋಹನ್ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಅವರ ಆಸೆಯನ್ನು ಕುಟುಂಬ ಈಡೇರಿಸಿದೆ.

ಹಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ನಿನ್ನೆ ರಾತ್ರಿ ಚಿಕ್ಕಬಾಣವರದ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹೆಸರುಘಟ್ಟ ರಸ್ತೆಯಲ್ಲಿರೋ ತಮ್ಮೇನಹಳ್ಳಿ ಹತ್ತಿರ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ವಾಲ್ ಪೋಸ್ಟರ್ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ ಅವರು ಗಣೇಶ್ ನಟನೆಯ ಚೆಲ್ಲಾಟ ಚಿತ್ರದಿಂದ ಫೇಮಸ್ ಆದರು. ಇತ್ತೀಚೆಗೆ ಬಿಡುಗಡೆಯಾದ ಯಶ್ ಅಭಿನಯದ ಕೆಜಿಎಫ್ ಒನ್ ಹಾಗೂ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ‘ಇವನು ಗ್ಯಾಂಗ್ ಸ್ಟರ್ ಅಲ್ಲ ಮಾನ್ ಸ್ಟಾರ್’ ಅಂತಾ ಹೇಳುವ ಡೈಲಾಗ್ ನಿಂದಲೇ ಹೆಚ್ಚು ಪ್ರಖ್ಯಾತಿ ಹೊಂದಿದ್ದರು. ಇನ್ನು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆ ಸೇರಿದಂತೆ ಬರೋಬ್ಬರಿ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು.