ಮೆಟ್ರೋ ಪಿಲ್ಲರ್​​ಗೆ ಬಸ್ ಡಿಕ್ಕಿ ; 25 ಮಂದಿಗೆ ಗಾಯ…

69
firstsuddi

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್​​ಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. 

ಕೆಎಸ್​​ಆರ್​​ಟಿಸಿ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ ಹೊಡೆದಿದೆ. ನಾಲ್ಕು ಅಡಿಯ ತಡೆಗೋಡೆಗೆ ಗುದ್ದಿ ಕೊನೆಗೆ ಪಿಲ್ಲರ್​​ಗೆ ಬಸ್ ಗುದ್ದಿದೆ ಎಂದು ತಿಳಿದುಬಂದಿದೆ. ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ.

ಬಸ್‍ನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. 25 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.