ಖ್ಯಾತ ಸಂಗೀತ ಮಾಂತ್ರಿಕ ಪಂಡಿತ್ ಶಿವಕುಮಾರ್ ಶರ್ಮಾ ನಿಧನ…

55
firstsuddi

ಮುಂಬೈ : ಖ್ಯಾತ ಸಂಗೀತ ಮಾಂತ್ರಿಕ, ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ(84) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಆರು ತಿಂಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಹೃದಯಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.

1938ರಲ್ಲಿ ಜಮ್ಮುವಿನಲ್ಲಿ ಜನಿಸಿದ ಶಿವಕುಮಾರ್ ಶರ್ಮಾ ಅವರು ತಮ್ಮ ಹದಿಮೂರನೇ ವಯಸ್ಸಿನಲ್ಲಿಯೇ ಸಂತೂರ್ ನುಡಿಸುವುದನ್ನು ಕಲಿಯಲು ಪ್ರಾರಂಭಿಸಿದರು. 1955ರಲ್ಲಿ ಮುಂಬೈನಲ್ಲಿ ಪ್ರಪ್ರಥಮ ಬಾರಿಗೆ ಸಾರ್ವಜನಿಕವಾಗಿ ಸಂತೂರ್ ಪ್ರದರ್ಶನ ನೀಡುವ ಮೂಲಕ ಜನಪ್ರಿಯತೆ ಗಳಿಸಿದ್ದರು.

ಪಂಡಿತ್ ಶಿವಕುಮಾರ್ ಶರ್ಮಾ ಅವರು, ಸಿಲ್ಸಿಲಾ, ಚಾಂದಿನಿ ಮತ್ತು ಡರ್ ಸೇರಿದಂತೆ ಹಲವಾರು ಹಿಂದಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಇವರ ಸಾಧನೆ ಗುರುತಿಸಿ 1991ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಮತ್ತು 2001ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.