ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತ : ಎಲಾನ್ ಮಸ್ಕ್ ಬಣ್ಣನೆ…

56
firstsuddi

ವಾಷಿಂಗ್ಟನ್ : ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಅವರು ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತದಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು 2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದೆ. ಆ ಸಂದರ್ಭದಲ್ಲಿ ಆಗ್ರಾದ ತಾಜ್ ಮಹಲ್ನ್ನು ನೋಡಿದ್ದೆ. ಇದು ನಿಜವಾಗಿಯೂ ವಿಶ್ವದ ಅದ್ಭುತವಾಗಿದೆ ಎಂದಿದ್ದಾರೆ. ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಡುತ್ತಿದ್ದು, ಮಸ್ಕ್ ಶೀಘ್ರದಲ್ಲೇ ಭಾರತಕ್ಕೆ ಆಗಮಿಸಲಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ.

ಅಷ್ಟೇ ಅಲ್ಲದೇ ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಮಸ್ಕ್ ಅವರ ತಾಯಿ ಮಾಯೆ ಮಸ್ಕ್ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, 1954ರಲ್ಲಿ ನಿಮ್ಮ ಅಜ್ಜಿಯರು ದಕ್ಷಿಣ ಆಫ್ರಿಕಾದಿಂದ ಆಸ್ಟ್ರೇಲಿಯಾಕ್ಕೆ ಹೋಗುವ ದಾರಿಯಲ್ಲಿ ತಾಜ್ ಮಹಲ್ ಅನ್ನು ನೋಡಲು ಹೋಗಿದ್ದರು. ರೇಡಿಯೋ ಅಥವಾ ಜಿಪಿಎಸ್ ಇಲ್ಲದೆ ಈ ಪ್ರಯಾಣವನ್ನು ಮಾಡಲು ಏಕೈಕ ಮಾರ್ಗವೆಂದರೆ ಇಂಜಿನ್ ಪ್ರೊಪೆಲ್ಲರ್ ವಿಮಾನಗಳು ಮಾತ್ರ ಇದ್ದವು ಎಂದಿದ್ದಾರೆ