ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋಗಿದ್ದ ವಧು ಮೇಲೆ ಸಾಮೂಹಿಕ ಅತ್ಯಾಚಾರ…

48
firstsuddi

ಭೋಪಾಲ್ : ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗುತ್ತಿದ್ದಾಗ ಯುವತಿಯನ್ನು ಮೂವರು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಏಪ್ರಿಲ್ 21ರಂದು ಯುವತಿಯ ಮದುವೆ ನಿಶ್ಚಯವಾಗಿತ್ತು. ಅದರಂತೆ ಯುವತಿ ತನ್ನ ಮದುವೆಯ ಕಾರ್ಡ್ ಗಳನ್ನು ಹಂಚಲು ಏಪ್ರಿಲ್ 18ರಂದು ತನ್ನ ಸ್ನೇಹಿತರ ಮನೆಗೆ ತೆರಳಿದ್ದಾಳೆ. ಈ ವೇಳೆ ದಾರಿ ಮಧ್ಯೆ ಗ್ರಾಮದ ಮೂವರು ಯುವಕರು ಆಕೆಯನ್ನು ಅಪಹರಿಸಿದ್ದಾರೆ. ಕೆಲವು ದಿನಗಳ ಕಾಲ ಬೇರೆ ಬೇರೆ ಸ್ಥಳಗಳಲ್ಲಿ ತನ್ನನ್ನು ಇಟ್ಟು ಅತ್ಯಾಚಾರ ನಡೆಸಿದ್ದಾರೆ. ನಂತರ ಝಾನ್ಸಿಯಲ್ಲಿ ರಾಜಕೀಯ ನಾಯಕನೊಬ್ಬನಿಗೆ ಒಪ್ಪಿಸಿದ್ದಾರೆ. ನನ್ನ ಇಚ್ಛೆಗೆ ವಿರುದ್ಧವಾಗಿ ಬೇರೊಬ್ಬರೊಂದಿಗೆ ಇರಲು ಮಧ್ಯಪ್ರದೇಶದ ದಾಟಿಯಾ ಗ್ರಾಮಕ್ಕೆ ಕಳುಹಿಸಿದರು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತೆ ದಾಟಿಯಾದಿಂದ ತನ್ನ ತಂದೆಯನ್ನು ಕರೆಸುವಲ್ಲಿ ಯಶಸ್ವಿಯಾಗಿದ್ದಾಳೆ. ಅಲ್ಲಿಂದ ಪೊಲೀಸರ ರಕ್ಷಣೆ ಪಡೆದಿದ್ದಾಳೆ. ಈ ವೇಳೆ ಯುವತಿ, ಅಪಹರಿಸಿ, ಅತ್ಯಾಚಾರ ಎಸಗಿ ಮಾರಾಟ ಮಾಡಿದವರ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತೆಹ್ರಾಲಿ ಸರ್ಕಲ್ ಆಫೀಸರ್ (ಸಿಒ) ಅನುಜ್ ಸಿಂಗ್ ತಿಳಿಸಿದ್ದಾರೆ.