ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ; ಇಂದು ಹೈಕಮಾಂಡ್ ನಾಯಕರ ಭೇಟಿ…

54
firstsuddi

ನವದೆಹಲಿ/ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸದಲ್ಲಿದ್ದು, ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ.

ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿ ವೇಳೆ ಹೈಕಮಾಂಡ್ ನಿಂದ ಸ್ಪಷ್ಟ ಸಂದೇಶ ರವಾನಿಸುವ ಸಾಧ್ಯತೆ ಇದೆ.

ಇತ್ತ ಸಚಿವಾಕಾಂಕ್ಷಿಗಳಿಗೆ ಕೂಡ ಟೆನ್ಶನ್ ಶುರುವಾಗಿದೆ. ಒಟ್ಟಿನಲ್ಲಿ ಹೈಕಮಾಂಡ್ ಸೂಚನೆ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಕುತೂಹಲ ಹುಟ್ಟಿಕೊಂಡಿದ್ದು, ಆ ಸಂದೇಶದಿಂದ ಯಾವ ಬದಲಾವಣೆ..? ಯಾರಿಗೆ ಶಾಕ್.. ಯಾರಿಗೆ ಲಕ್ ಎಂಬುದು ತಿಳಿದುಬರಲಿದೆ.