ಟೊಮೊಟೊ ಜ್ವರ ಭೀತಿ ; ಬಾವಲಿ ಚೆಕ್ ಪೋಸ್ಟ್​​ನಲ್ಲಿ ಕಟ್ಟೆಚ್ಚರ…

55
firstsuddi

ಮೈಸೂರು : ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 80ಕ್ಕೂ ಹೆಚ್ಚು ಮಕ್ಕಳಲ್ಲಿ ಟೊಮಾಟೊ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕರ್ನಾಟಕ-ಕೇರಳ ಗಡಿಯ ಭಾಗವಾದ ಬಾವಲಿ ಚೆಕ್ ಪೋಸ್ಟ್ ಮೂಲಕ ಪ್ರವೇಶಿಸುವ ಜನರನ್ನು ವೈದ್ಯಕೀಯ ತಂಡವು ಪರೀಕ್ಷೆಗೆ ಒಳಪಡಿಸುತ್ತಿದೆ. ಸ್ಥಳಕ್ಕೆ ತಹಶೀಲ್ದಾರ್ ರತ್ನಾಂಬಿಕ ,ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ ಟಿ.ರವಿಕುಮಾರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.