ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಆ್ಯಸಿಡ್ ನಾಗ.

52
firstsuddi

ಬೆಂಗಳೂರು : ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ 16 ದಿನಗಳ ಬಳಿಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ನಾಗೇಶ್ ಸ್ವಾಮೀಜಿ ವೇಷಧರಿಸಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ತಲೆಮರೆಸಿಕೊಂಡಿದ್ದ. ಇದೀಗ ಕಾಮಾಕ್ಷಿಪಾಳ್ಯ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೂ ಆ್ಯಸಿಡ್ ದಾಳಿಗೆ ಒಳಗಾಗಿ ಸೆಂಟ್ ಜಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯನ್ನ ಇದೀಗ ಬರ್ನಿಂಗ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಅಲ್ಲಿಗೆ ಬರೋಬ್ಬರಿ 16 ದಿನಗಳ ನಿರಂತರ ಹೋರಾಟದಲ್ಲಿ ಯುವತಿ ಗೆದ್ದು ಬಂದಿದ್ದಾರೆ. ಬರ್ನಿಂಗ್ ಸ್ಪೆಷಲ್ ವಾರ್ಡ್ ನಲ್ಲಿ ಯುವತಿ ಆರೈಕೆಯಲ್ಲಿದ್ದಾರೆ.