ತ್ರಿಪುರಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಪ್ಲಬ್ ಕುಮಾರ್ ದೇಬ್.

55
firstsuddi

ತ್ರಿಪುರಾ : ಬಿಪ್ಲಬ್ ಕುಮಾರ್ ದೇವ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ವಿಧಾನಸಭೆ ಚುನಾವಣೆ ನಡೆಯಲು ಕೇವಲ ಒಂದು ವರ್ಷ ಬಾಕಿ ಇರುವಾಗಲೇ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ ನೀಡಿರುವುದು ತೀರ್ವ ಚರ್ಚೆಗೆ ಕಾರಣವಾಗಿದೆ.

ತಮ್ಮ ರಾಜೀನಾಮೆ ಪತ್ರವನ್ನ ರಾಜ್ಯಪಾಲರಿಗೆ ರವಾನೆ ಮಾಡಿದ್ದಾರೆಂದು ತಿಳಿದುಬಂದಿದೆ. 2018ರಲ್ಲಿ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.

ಇದೀಗ ಇಂದು ಸಂಜೆ 5 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಸಿ, ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ಸಾಧ್ಯತೆ ಇದೆ.