ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ – ಎಸ್‌ಡಿಪಿಐ ಆಕ್ಷೇಪ…

75
firstsuddi

ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳ ದಳದಿಂದ ನೂರಾರು ಯುವಕರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ.

ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಕಳೆದ ವಾರ ಮುಕ್ತಾಯವಾದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಶಾಲಾ ಆವರಣದಲ್ಲೇ ಸುಮಾರು 8 ದಿನಗಳ ಕಾಲ ಶೌರ್ಯ ಪ್ರಶಿಕ್ಷಣ ವರ್ಗದ ತರಬೇತಿ ನಡೆದಿದೆ. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ತರಬೇತಿ ಪಡೆದುಕೊಂಡಿದ್ದಾರೆ. ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು ಹಾಗೂ ಸಂಸ್ಥೆಯ ಸಭಾಂಗಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಕುರಿತು ಟ್ವೀಟ್  ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು, ಮಾನ್ಯ ಬಿ.ಸಿ.ನಾಗೇಶ್ ಅವರೇ, ಶಾಲೆಗಳಲ್ಲಿ ಹಿಜಾಬ್ ಗೆ ನಿರ್ಭಂಧ ವಿಧಿಸಿರುವ ನಿಮ್ಮ ಸರ್ಕಾರ ಬಜರಂಗದಳಕ್ಕೆ ಒಂದು ವಾರದ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಲು ಅನುಮತಿ ಕೊಟ್ಟ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಾಯಿ ಶಂಕರ ಶಿಕ್ಷಣ ಸಂಸ್ಥೆಯ ವಿರುದ್ದ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಡಗು ಡಿಸಿ, ಎಸ್‍ಪಿರಲ್ಲಿ ಆಗ್ರಹಿಸಿದ್ದಾರೆ.