ಪಠ್ಯದಲ್ಲಿ ಆರ್​​ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ ; ಕ್ಯಾಂಪಸ್ ಫ್ರಂಟ್ ವಿರೋಧ…

58
firstsuddi

ಬೆಂಗಳೂರು : 2022-23ನೇ ಸಾಲಿನ ಹತ್ತನೆಯ ತರಗತಿಯ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ ಎಸ್ ಎಸ್) ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಲಾಗಿದೆ. ಇದಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ವಿರೋಧಿಸಿದೆ.

ಇದು ಶಿಕ್ಷಣದ ಕೇಸರೀಕರಣದ ಮುಂದುವರಿದ ಭಾಗವಾಗಿದೆ. ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಹೇಗೆ ಆದರ್ಶ ಪುರುಷನಾಗಲು ಸಾಧ್ಯ ಎಂದು ಕ್ಯಾಂಪಸ್ ಫ್ರಂಟ್ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದೆ. ಅಲ್ಲದೇ ಇಂತಹ ದೇಶದ್ರೋಹಿಯ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ಶಿಕ್ಷಣದಲ್ಲಿ ಹಿಂದುತ್ವ ಸಿದ್ಧಾಂತದ ಹೇರಿಕೆಯೆಂಬುದು ಸ್ಪಷ್ಟವಾಗಿದೆ. ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ವಿರೋಧಿಸಿದೆ. ಈ ಹೆಡ್ಗೆವಾರ್ ಭಾಷಣವನ್ನು ಶೀಘ್ರವೇ ಪಠ್ಯಕ್ರಮದಿಂದ ಕೈ ಬಿಡಬೇಕೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.