ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ…

56
firstsuddi

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಇಂದು ಮತ್ತು ಮೇ 19 ರಂದು ಆರೆಂಜ್ ಅಲರ್ಟ್, ನಾಳೆ (ಮೇ 18 ) ರಂದು ರೆಡ್ ಅಲರ್ಟ್, ಮತ್ತು ಮೇ 19 ರಿಂದ 21 ರವರೆಗೆ ಎಲ್ಲೋ ಆಲರ್ಟ್ ಘೋಷಿಸಲಾಗಿದೆ. ಅದೇ ರೀತಿ ದಕ್ಷಿಣ ಒಳನಾಡು ಭಾಗದಲ್ಲಿ ನಾಳೆಯಿಂದ 21 ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.