ಹೆಚ್.ಡಿ.ದೇವೇಗೌಡರ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ.

52
firstsuddi

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶುಭಕೋರಿದ್ದಾರೆ.

‘ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ಹೆಚ್.ಡಿ.ದೇವೇಗೌಡ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಅನುಗ್ರಹಿಸಲಿ’ ಎಂದು ಆಶಿಸಿದ್ದಾರೆ.