ಗಾಂಧಿನಗರ : ಗುಜರಾತ್ ಪ್ರಭಾವಿ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುಂಚಿತವಾಗಿ ಈ ಬೆಳವಣಿಗೆ ನಡೆದಿದೆ.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಹಾರ್ದಿಕ್ ಪಟೇಲ್ 2019 ರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.
ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಬೂದಿ ಮುಚ್ಚಿದ ಕೆಂಡದಂತಿದೆ. ಪಕ್ಷದ ಹಲವು ರಾಜ್ಯ ಘಟಕಗಳಲ್ಲಿ ಹಿರಿಕಿರಿಯರ ನಡುವೆ ಹೊಂದಾಣಿಕೆ ಕೊರತೆ ಕಂಡುಬರುತ್ತಿದೆ.
आज मैं हिम्मत करके कांग्रेस पार्टी के पद और पार्टी की प्राथमिक सदस्यता से इस्तीफा देता हूँ। मुझे विश्वास है कि मेरे इस निर्णय का स्वागत मेरा हर साथी और गुजरात की जनता करेगी। मैं मानता हूं कि मेरे इस कदम के बाद मैं भविष्य में गुजरात के लिए सच में सकारात्मक रूप से कार्य कर पाऊँगा। pic.twitter.com/MG32gjrMiY
— Hardik Patel (@HardikPatel_) May 18, 2022










