ಶೀನಾ ಬೋರಾ ಹತ್ಯೆ ಪ್ರಕರಣ ; ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಜಾಮೀನು…

66
firstsuddi

ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ಇಂದ್ರಾಣಿ ಮುಖರ್ಜಿ ವಿರುದ್ಧ 2012 ರ ಏ.24 ರಂದು ತನ್ನ ಮಗಳು ಶೀನಾ ಬೋರಾಳನ್ನು ಹತ್ಯೆ ಮಾಡಿರುವ ಆರೋಪವಿದೆ. ಕಾರಿನಲ್ಲಿ ಇಂದ್ರಾಣಿ ಮುಖರ್ಜಿ ಮತ್ತು ಆಕೆಯ ಕಾರಿನ ಚಾಲಕ ಶ್ಯಾಮವರ್ ರೈ ಮತ್ತು ಮಾಜಿ ಪತಿ ಸಂಜೀವ್ ಖನ್ನಾ ಕತ್ತು ಹಿಸುಕಿ ಕೊಲೆ ಮಾಡಿದ್ದರು. ನಂತರ ಶೀನಾ ಶವ ಸುಟ್ಟುಹಾಕಿದ ಸ್ಥಿತಿಯಲ್ಲಿ ರಾಯಗಢ್ ಜಿಲ್ಲೆಯ ಅರಣ್ಯದಲ್ಲಿ ಪತ್ತೆಯಾಗಿತ್ತು.

ಈ ಸಂಬಂಧ 2015ರಲ್ಲಿ ಮುಂಬೈ ಪೊಲೀಸರು ಇಂದ್ರಾಣಿ ಮುಖರ್ಜಿ ಅವರನ್ನು ಬಂಧಿಸಿತ್ತು. ಕಳೆದ ಆರೂವರೆ ವರ್ಷದಿಂದ ಇಂದ್ರಾಣಿ ಮುಖರ್ಜಿ ಜೈಲಿನಲ್ಲಿದ್ದರು.