ಬೆಂಗಳೂರು : ನಗರದ ಪ್ರತಿಷ್ಠಿತ ಎರಡು ಶಾಲೆಯ ವಿದ್ಯಾರ್ಥಿನಿಯರು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಲಾ ಸಮವಸ್ತ್ರದಲ್ಲಿಯೇ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸ್ಟಿಕ್ ಹಿಡಿದು ಬಡಿದಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರು ಪರಸ್ಪರ ಕೂದಲನ್ನು ಎಳೆದಾಡಿಕೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಜಟಾಪಟಿಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೆಲವರ ಮೂಗಿನಲ್ಲಿ ರಕ್ತಸ್ರಾವಾಗಿದೆ ಎಂದು ಹೇಳಲಾಗುತ್ತಿದೆ.
ವಿದ್ಯಾರ್ಥಿನಿಯರ ನಡುವಿನ ಗಲಾಟೆಗೆ ಕಾರಣ ತಿಳಿದುಬಂದಿಲ್ಲ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆದರೆ ಯಾವುದೇ ರೀತಿಯ ದೂರು ದಾಖಲಾಗಿಲ್ಲ.










