ಮಂಗಳೂರು : ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ ಯಶೋವರ್ಮ(66) ಅವರು ವಿಧಿವಶರಾಗಿದ್ದಾರೆ.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ನಿನ್ನೆ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ.
ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಹಲವು ವರ್ಷಗಳ ಕಾಲ ಡಾ.ಯಶೋವರ್ಮ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು.










