ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ; 8 ಮಂದಿ ಸಾವು…

62
firstsuddi

ಹುಬ್ಬಳ್ಳಿ : ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 8 ಜನರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ 25 ಜನರನ್ನು ಕಿಮ್ಸ್ ಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿಚೀಲಗಳೊಂದಿಗೆ ಧಾರವಾಡ ಕಡೆ ಹೊರಟಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ.