ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿ ಪಡೆದಿದ್ದ ಶಂಕರೇಗೌಡರಿಗೆ ಹೃದಯಾಘಾತ…

55
firstsuddi

ಮೈಸೂರು : ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿ ಪಡೆದಿರುವ ಡಾ. ಶಂಕರೇಗೌಡ ಅವರಿಗೆ ನಿನ್ನೆ ಹೃದಯಘಾತವಾಗಿದೆ. ಸದ್ಯ ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ಸದ್ಯ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿದೆ. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅದೃಷ್ಟವಶಾತ್ ಶಂಕರೇಗೌಡರು ಪ್ರಾಣಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಚರ್ಮ ಮತ್ತು ಲೈಂಗಿಕ ರೋಗ ತಜ್ಞರಾಗಿರುವ ಶಂಕರೇಗೌಡರು 5 ರೂಪಾಯಿ ಡಾಕ್ಟರ್ ಎಂದೇ ಚಿರಪರಿಚಿತರು. ಇವರು ಕೇವಲ ಚಿಕಿತ್ಸೆಯ ಶುಲ್ಕವಾಗಿ ಮಂಡ್ಯದಲ್ಲಿರುವ ತಮ್ಮ ತಾರಾ ಕ್ಲಿನಿಕ್ ನಲ್ಲಿ 5 ರೂ. ಪಡೆದರೆ, ತಮ್ಮ ಊರಾದ ಶಿವಳ್ಳಿಗೆ ಬಂದ ರೋಗಿಗಳಿಗೆ ಯಾವುದೇ ಶುಲ್ಕ ಪಡೆಯದೆ ಉಚಿತ ಚಿಕಿತ್ಸೆ ನೀಡುತ್ತಾರೆ.