ಶ್ರೀಲಂಕಾದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ…

53
firstsuddi

ಕೊಲಂಬೊ : ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಲೀಟರ್ ಪೆಟ್ರೋಲ್ ಬೆಲೆ ಶೇ.24.3ರಷ್ಟು, ಡೀಸೆಲ್ ಬೆಲೆ ಶೇ.38.4ರಷ್ಟು ಏರಿಕೆಯಾಗಿದೆ.

ಲಂಕಾದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು ಇದು 2ನೇ ಸಲ. ಇದೀಗ 1 ಲೀಟರ್ ಪೆಟ್ರೋಲ್ ಬೆಲೆ 82 ರೂಪಾಯಿ ಏರಿಕೆಯಾಗಿ 420 ರೂಪಾಯಿಗೆ ತಲುಪಿದೆ. 111 ರೂ.ಗಳ ಏರಿಕೆ ಕಂಡ ಡೀಸೆಲ್ 1 ಲೀಟರ್ಗೆ 400 ರೂ. ಆಗಿದೆ. ಅಗತ್ಯ ವಸ್ತುಗಳ ಖರೀದಿಗೆ ವಿದೇಶಿ ಕರೆನ್ಸಿ ಕೊರತೆ ಕಾರಣದಿಂದಾಗಿ ಶ್ರೀಲಂಕಾ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಪರಿಣಾಮವಾಗಿ ಇಂಧನ ಬೆಲೆಯಲ್ಲೂ ದಾಖಲೆಯ ಏರಿಕೆಯಾಗಿದೆ.

ಲಂಕಾದ ಪೆಟ್ರೋಲಿಯಂ ಕಾರ್ಪೊರೇಷನ್ ಇಂದು ಇಂಧನ ಬೆಲೆಯನ್ನು ಪರಿಷ್ಕರಣೆ ಮಾಡಿದ್ದು, ಪರಿಷ್ಕೃತ ಬೆಲೆಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಇದನ್ನು 15 ದಿನಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡಲಾಗುವುದು ಎಂದು ಇಂಧನ ಸಚಿವರು ತಿಳಿಸಿದ್ದಾರೆ.