ಮುಂಬೈ : ಮುಂಬೈನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಗೆ ಕ್ಲೀನ್ ಚಿಟ್ ನೀಡಲಾಗಿದೆ.
ಇಂದು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಎನ್ ಡಿಪಿಎಸ್ ನ್ಯಾಯಾಲಯದಲ್ಲಿ ಆರ್ಯನ್ ಖಾನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಆರ್ಯನ್ ಖಾನ್ ಹೆಸರನ್ನು ಕೈಬಿಟ್ಟಿದೆ. ಆರ್ಯನ್ ಖಾನ್ ಸೇರಿದಂತೆ ಒಟ್ಟು 6 ಜನರ ಹೆಸರನ್ನು ತೆಗೆದು ಹಾಕಿದೆ.
ಅಕ್ಟೋಬರ್ 2 ರಂದು, ಕ್ರೂಸ್ ಮೇಲೆ ಎಎಸ್ಸಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಇದರಲ್ಲಿ ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಒಟ್ಟು 19 ಮಂದಿಯನ್ನು ಬಂಧಿಸಲಾಗಿತ್ತು.










