11 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ…

69
firstsuddi

ಬೆಂಗಳೂರು : 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಜನೀಶ್ ಗೋಯಲ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ.  ಐಎಸ್ ಎನ್ ಪ್ರಸಾದ್ ಗೆ  ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಉಮಾಶಂಕರ್ – ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, ವಿನೋಥ್ ಪ್ರಿಯಾ- ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ.

ರಾಮ್ ಪ್ರಸಾದ್ ಮನೋಹರ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರಾಗಿ, ರಮೇಶ್ ಡಿ.ಎಸ್ – ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ, ಸತ್ಯಭಾಮರನ್ನು ಅತಿಸಣ್ಣ, ಸಣ್ಣ, ಮಧ್ಯಮ ಉದ್ಯಮ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿ, ಸೋಮಶೇಖರ್ ಎಸ್.ಜೆ. ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂಡಿಯಾಗಿ ಹಾಗೂ ಶರತ್.ಬಿ- ಕೃಷಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.