ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿಗಳಾದ ಶಾಂತಿಬಾಯಿ ಹಾಗೂ ಆಕೆಯ ಪತಿ ಬಸಯ್ಯ ನಾಯಕ ಕೊನೆಗೂ ಹೈದರಾಬಾದ್ ನಲ್ಲಿ ಲಾಕ್ ಆಗಿದ್ದಾರೆ.
ಅಭ್ಯರ್ಥಿ ಶಾಂತಿಬಾಯಿ ಪ್ರಕರಣದ ಕಿಂಗ್ ಪಿನ್ ಗಳಾದ ಮಂಜುನಾಥ ಮೇಳಕುಂದಿಗೆ ಹಣ ನೀಡಿ ಪರೀಕ್ಷೆ ಬರೆದಿದ್ದಳು ಹಾಗೂ ಆಕೆಯ ಪತಿ ಬಸಯ್ಯ ನಾಯಕ ಅಕ್ರಮಕ್ಕೆ ಸಹಕರಿಸಿದ್ದ ಎಂದು ತಿಳಿದುಬಂದಿದೆ.
ಪ್ರಕರಣ ಹೊರಬೀಳುತ್ತಿದ್ದಂತೆ ಇಬ್ಬರು ಹೈದ್ರಾಬಾದ್ ನಲ್ಲಿ ತಲೆ ಮರೆಸಿಕೊಂಡಿದ್ದರು. ಇವರ ಪತ್ತೆಗೆ ಸಿಐಡಿ ಪೊಲೀಸರು ಕಳೆದ ಎರಡು ತಿಂಗಳಿನಿಂದ ಶೋಧ ನಡೆಸುತ್ತಿದ್ದರು. ಕೊನೆಗೂ ದಂಪತಿಯನ್ನು ಸಿಐಡಿ ಪೊಲೀಸರು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.










