ಬೆಂಗಳೂರು : ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಅವರ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಮಸಿ ಬಳಿಯಲಾಗಿದೆ.
ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಇಂದು ನಗರದ ಗಾಂಧಿ ಭವನದಲ್ಲಿ ಸ್ಪಷ್ಟೀಕರಣ ನೀಡಲು ಸುದ್ದಿಗೋಷ್ಠಿ ಕರೆದಿದ್ದರು. ರಾಷ್ಟ್ರೀಯ ಕಿಸಾನ್ ಮೊರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್, ಯುದ್ಧವೀರ್ ಸಿಂಗ್ , ಪ್ರೊಫೆಸರ್ ರವಿ ವರ್ಮಕುಮಾರ್, ಚುಕ್ಕಿ ನಂಜುಂಡಸ್ವಾಮಿ ಅವರು ವೇದಿಕೆಯಲ್ಲಿದ್ದರು.
ಸುದ್ದಿಗೋಷ್ಠಿ ನಡೆಯುತ್ತಿದ್ದ ವೇಳೆಯೇ ಏಕಾಏಕಿ ವೇದಿಕೆಗೆ ನುಗ್ಗಿದ್ದ ವ್ಯಕ್ತಿ, ಟಿವಿ ಚಾನಲ್ ಮೈಕ್ ಕಿತ್ತುಕೊಂಡು ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಎರಚಿದ್ದಾನೆ. ನಂತರ ಎಲ್ಲರೂ ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಕುರ್ಚಿಗಳನ್ನು ಹಿಡಿದು ತೂರಿದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈಗಾಗಲೇ ಮಸಿ ಬಳಿದಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.










