ರಾಜ್ಯಸಭೆ ಚುನಾವಣೆ : ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್.

51
firstsuddi

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಗೆ ಕರ್ನಾಟಕದಿಂದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ, ವಿ.ಸೋಮಣ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇತ್ತ ಜೆಡಿಎಸ್ ನಿಂದ ಕುಪ್ಪೇಂದ್ರ ರೆಡ್ಡಿ ಅವರು ಸಹ ನಾಮಪತ್ರ ಸಲ್ಲಿಕೆ ಮಾಡಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಹೆಚ್.ಡಿ ರೇವಣ್ಣ, ಎ.ಟಿ ರಾಮಸ್ವಾಮಿ ಉಪಸ್ಥಿತಿಯಲ್ಲಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಬಳಿ ತಮ್ಮ ಉಮೇದುವಾರಿಕೆಯನ್ನ ಸಲ್ಲಿಕೆ ಮಾಡಿದರು.