ಉಗ್ರರಿಂದ ಕಾಶ್ಮೀರಿ ಪಂಡಿತ ಶಿಕ್ಷಕಿಯ ಹತ್ಯೆ…

45
firstsuddi

ಶ್ರೀನಗರ : ಕಾಶ್ಮೀರಿ ಪಂಡಿತ ಶಿಕ್ಷಕಿಯನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ದಕ್ಷಿಣ ಕಾಶ್ಮೀರದ ಕುಲ್ಗಾಂ ಪ್ರದೇಶದ ಗೋಪಾಲಪೊರಾದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕುಲ್ಗಾಮ್ ನ ಗೋಪಾಲಪೊರಾ ಹೈಸ್ಕೂಲ್ ನಲ್ಲಿ ಶಿಕ್ಷಕಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ತಕ್ಷಣವೇ ಕುಲ್ಗಾಮ್ ನ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.

ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು. ಕಳೆದ ವಾರ, ಬುದ್ಗಾಮ್ ನ ಚದೂರ ಪ್ರದೇಶದಲ್ಲಿ ಕಲಾವಿದೆ ಅಮ್ರೀನ್ ಭಟ್ ಸಾವನ್ನಪ್ಪಿದ್ದರು.