ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ ; ನೂತನ ರಾಜ್ಯಾಧ್ಯಕ್ಷ ನೇಮಕ…

71
firstsuddi

ಶಿವಮೊಗ್ಗ : ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದ್ದು, ರೈತ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಆರ್.ಬಸವರಾಜಪ್ಪ ಅವರನ್ನು ನೇಮಕ ಮಾಡಲಾಗಿದೆ.

ನಗರದ ರೈತ ಸಂಘ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಭ್ರಷ್ಟಚಾರ ಆರೋಪ ಹಿನ್ನಲೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.