ಪಿಎಂ ಕಿಸಾನ್ ನಿಧಿ 11ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.

75
firstsuddi

ಶಿಮ್ಲಾ(ಹಿಮಾಚಲ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಎಂಟು ವರ್ಷ ಪೂರ್ಣವಾಗಿರುವ ಹಿನ್ನಲೆ ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಗರೀಬ್ ಕಲ್ಯಾಣ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (PM-KISAN) ಯೋಜನೆ ಅಡಿಯಲ್ಲಿ ದೇಶದ 10 ಕೋಟಿ ರೈತರಿಗೆ 21 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಒಟ್ಟು 10 ಕೋಟಿ ಅನ್ನದಾತರ ಖಾತೆಗಳಿಗೆ ನೇರವಾಗಿ 2 ಸಾವಿರ ರೂಪಾಯಿ ನಗದು ಜಮಾವಣೆಗೊಂಡಿದೆ. ಈ ಯೋಜನೆಗೋಸ್ಕರ ಇಲ್ಲಿಯವರೆಗೆ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೊತ್ತ ವೆಚ್ಚ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಣ್ಣ ಹಿಡುವಳಿದಾರರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದು, ನಾಲ್ಕು ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗಳಿಗೆ 2 ಸಾವಿರ ಹಣ ಜಮಾವಣೆ ಆಗುತ್ತಿದೆ.