ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿಗೆ ಇಂದು ಸಮನ್ಸ್ ಜಾರಿ ಮಾಡಿದೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ಸಂಸದ ಅಭಿಷೇಕ್ ಮನು ಸಿಂಘ್ವಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಸೋನಿಯಾ ಗಾಂಧಿ ಹೇಳಿದ ದಿನಾಂಕದಂದು ಅಗತ್ಯವಿದ್ದಲ್ಲಿ ಹಾಜರಾಗುತ್ತಾರೆ. ಆದರೆ, ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದು ರಾಹುಲ್ ಗಾಂಧಿಗೆ ಕಾಲಾವಕಾಶ ನೀಡುವಂತೆ ಕೋರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಸಮನ್ಸ್ ಜಾರಿ ಮಾಡಲಾಗಿತ್ತು.










