ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,712 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,64,544ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,641ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,31,64,544 ಮಂದಿ ಸೋಂಕಿತರ ಪೈಕಿ ಈವರೆಗೆ 4,26,20,394 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










