ಬೆಂಗಳೂರು : ಸಿಎಂ ಕಿಸಾನ್ ಸಮ್ಮಾನ್, ಕರ್ನಾಟಕ ಯೋಜನೆಯಡಿ ರಾಜ್ಯ ಸರ್ಕಾರದಿಂದ ರಾಜ್ಯದ ಕಂತಾದ 2,000 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದು ರಾಜ್ಯದ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.
ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್, ಜಲಾನಯನ ಇಲಾಖೆ ಆಯುಕ್ತ ಡಾ. ವೆಂಕಟೇಶ್, ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.










