ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಚಂಪಾವತ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿಯಾಗಿ ಮುಂದುವರೆಯಲು ಪುಷ್ಕರ್ ಸಿಂಗ್ ಧಾಮಿ ಅವರಿಗೆ ಈ ಉಪ ಚುನಾವಣೆಯಲ್ಲಿ ಗೆಲ್ಲಬೇಕಿತ್ತು. ಇವರ ಎದುರಾಳಿಯಾಗಿ ಕಾಂಗ್ರೆಸ್ ಅಭ್ಯರ್ಥಿ ನಿರ್ಮಲಾ ಗೆಹ್ ತೊರ್, ಸಮಾಜವಾದಿ ಪಕ್ಷದ ಮನೋಜ್ ಕುಮಾರ್ ಭಟ್ ಹಾಗೂ ಸ್ವತಂತ್ರ ಅಭ್ಯರ್ಥಿ ಹಿಮಾಂಶು ಗಡ್ಕೊಟಿ ಸ್ಪರ್ಧೆ ಮಾಡಿದ್ದರು. ಇದೀಗ ಮುಖ್ಯಮಂತ್ರಿ ಧಾಮಿ ಎದುರಾಳಿ ಕಾಂಗ್ರೆಸ್ ನ ನಿರ್ಮಲಾ ವಿರುದ್ಧ 54 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಚಂಪಾವತ್ ನಲ್ಲಿ ಮೇ 31ರಂದು ಮತದಾನ ನಡೆದಿತ್ತು.










