ನಾಳೆ ಹೊಸಪೇಟೆಯಲ್ಲಿ ಅಪ್ಪು ಕಂಚಿನ ಪುತ್ಥಳಿ ಪ್ರತಿಷ್ಠಾಪನೆ…

77
firstsuddi

ವಿಜಯನಗರ : ಅಪ್ಪು ಅಭಿಮಾನಿಗಳು ಒಂದಿಲ್ಲೊಂದು ರೀತಿಯಲ್ಲಿ ನೆಚ್ಚಿನ ನಟನನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಪುನೀತ್ ರಾಜ್ ಕುಮಾರ್ ಅವರ ಮೇಲೆ ಅಪಾರ ಅಭಿಮಾನ ಇಟ್ಟುಕೊಂಡಿರುವ ಹೊಸಪೇಟೆ ಜನ ನಾಳೆ (ಜೂ.5ರಂದು) ಪುನೀತ್ ಅವರ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲಿದ್ದಾರೆ.

ಹೊಸಪೇಟೆ ಜನ ಜಿಲ್ಲಾ ಕ್ರೀಡಾಂಗಣಕ್ಕೆ ಹಾಗೂ ನಗರದ ಹೃದಯ ಭಾಗದಲ್ಲಿರುವ ವೃತ್ತಕ್ಕೆ ಪುನೀತ್ ರಾಜ್ಕುಮಾರ್ ವೃತ್ತ ಎಂದು ನಾಮಕರಣ ಮಾಡಿದ್ದಾರೆ. ಇದೀಗ ಈ ವೃತ್ತದಲ್ಲಿ ಪುನೀತ್ ಅವರ ಏಳು ಅಡಿ ಎತ್ತರದ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದ್ದು, ನಾಳೆ ಅದನ್ನು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಜ್ ಕುಟುಂಬದ ಸದಸ್ಯರು, ನಟರಾದ ಶ್ರೀಮುರಳಿ, ನಿರ್ದೇಶಕರಾದ ಸಂತೋಷ್ ಆನಂದ್ರಾಮ್, ಚೇತನ್ ಕುಮಾರ, ಭಾಗವಹಿಸಲಿದ್ದಾರೆ. ಈ ಪುತ್ಥಳಿ ಉದ್ಘಾಟನೆಯ ಕಾರ್ಯಕ್ರಮವನ್ನು ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬದವರು ನೆರವೇರಿಸಲಿದ್ದಾರೆ.