ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ : 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ.

56
firstsuddi

ಬೆಂಗಳೂರು : ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಹಿನ್ನೆಲೆ ರಾಯಚೂರಿನಲ್ಲಿ ಇಂದು ಬಂದ್ ಗೆ ಕರೆ ಕೊಡಲಾಗಿದೆ. ಈ ಕುರಿತು ಮಾತನಾಡಿದ ಸಿಎಂ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬಗ್ಗೆ ಸಂಪೂರ್ಣ ವರದಿ ತರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡ್ತೇವೆ ಎಂದು ಘೋಷಿಸಿದರು.

ಆರ್.ಟಿ.ನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ವರದಿ ಕೇಳಿದ್ದೇನೆ. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಜಿಲ್ಲಾವಾರು ಸಭೆ ಮಾಡಿ, ವರದಿ ಕೊಡ್ತೀನಿ ಅಂದಿದ್ದಾರೆ. ಅದರ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕೆಲವು ನಿರ್ಣಯ ಕೈಗೊಳ್ಳುತ್ತೇವೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಎರಡನೇ ಅಲೆಯ ಕೋವಿಡ್ ಪರಿಹಾರ ವಿಚಾರವಾಗಿ ಮಾತನಾಡಿದ ಅವರು, ಎರಡನೇ ಅಲೆಯಲ್ಲಿ ಕೋವಿಡ್ ನಿಂದ ಮೃತರಾದವರ ಕುಟುಂಬಗಳಿಗೆ ಪರಿಹಾರ ಕೊಡಲಾಗಿದೆ. ಕೆಲವರಿಗೆ ಪರಿಹಾರ ಬಿಟ್ಟು ಹೋಗಿದ್ದರೆ ಅದನ್ನು ಕೊಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.