ಗರ್ಭಿಣಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

62
firstsuddi

ಪಂಜಾಬ್ ಪ್ರಾಂತ್ಯ(ಪಾಕಿಸ್ತಾನ): ಗರ್ಭಿಣಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ.

ಮನೆಗೆ ನುಗ್ಗಿದ ಕಿಡಿಗೇಡಿಗಳು ಮಹಿಳೆಯ ಪತಿ ಮೇಲೆ ಹಲ್ಲೆ ನಡೆಸಿ ಹಗ್ಗದಿಂದ ಕಟ್ಟಿಹಾಕಿದ್ದಾರೆ. ಬಳಿಕ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಘಟನೆ ಬೆನ್ನಲ್ಲೇ ಮಹಿಳೆ ಆಸ್ಪತ್ರೆಗೆ ತೆರಳಿದ್ದು, ಅಲ್ಲಿ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಬಳಿ ಹೇಳಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದೀಗ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ರಕ್ತದ ಮಾದರಿಗಳನ್ನು ಫೋರೆನ್ಸಿಕ್ ಪರೀಕ್ಷೆಗಾಗಿ ಲಾಹೋರ್ ಗೆ ಕಳುಹಿಸಲಾಗಿದೆ.

ಐವರು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳ ಬಂಧನಕ್ಕಾಗಿ ಪಂಜಾಬ್ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದು, ಶೋಧ ಕಾರ್ಯ ಆರಂಭಿಸಿದ್ದಾರೆ.