ಪಂಜಾಬ್ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಬಂಧನ…

54
firstsuddi

ಚಂಡೀಗಢ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಅವರನ್ನ ಇಂದು ಬೆಳಗ್ಗೆ ವಿಜೆಲೆನ್ಸ್ ಇಲಾಖೆ ಬಂಧಿಸಿದೆ. ಇವರೊಂದಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ ಅವರನ್ನು ಕೂಡ ಬಂಧಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ 25 ಸಾವಿರಕ್ಕೂ ಅಧಿಕ ಮರಗಳನ್ನ ಅಕ್ರಮವಾಗಿ ಕಡಿಸಿರುವ ಆರೋಪ ಇವರ ಮೇಲಿದೆ. ಜೊತೆಗೆ ಮರ ಕಡಿಯಲು ಹಣ ಪಡೆದುಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು.

ಈ ಹಿಂದೆ ಮುಖ್ಯಮಂತ್ರಿ ಭಗವಂತ್ ಮಾನ್ ಸಿಂಗ್ ಮಾಜಿ ಸಚಿವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಅವರನನ್ನು ಬಂಧಿಸಲಾಗಿದೆ.