ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಮೂರು ತಿಂಗಳ ಗರ್ಭಿಣಿಯಾದ ವಿದ್ಯಾರ್ಥಿನಿ!

86
firstsuddi

ಹಾವೇರಿ : ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ಎಂಬುವವರ ವಿರುದ್ಧ ಈ ಆರೋಪ ಕೇಳಿಬಂದಿದೆ.

ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಒಂದೂವರೆ ವರ್ಷಗಳಿಂದ ಏಳೆಂಟು ಬಾರಿ ಸಹಾಯಕ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ. ಅಲ್ಲದೇ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾನಂತೆ.

ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ನಿಂಗಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ. ನಿರಂತರ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಸದ್ಯ ವಿದ್ಯಾರ್ಥಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಿಂಗಪ್ಪ ಕಲಕೋಟಿ ವಿರುದ್ಧ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2)(N) ಮತ್ತು 506ರ ಅಡಿ ದೂರು ದಾಖಲಾಗಿದೆ.