ಬಿಜೆಪಿ ಶಾಸಕ ಎಂ.ರಘುನಂದನ್ ರಾವ್ ವಿರುದ್ಧ ಪ್ರಕರಣ ದಾಖಲು…

83
firstsuddi

ಹೈದರಾಬಾದ್ : ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಗುರುತು ಬಹಿರಂಗ ಪಡಿಸಿದ ಆರೋಪದ ಮೇಲೆ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೇ 28ರಂದು ಪಬ್ ಗೆ ತೆರಳಿದ್ದ ಬಾಲಕಿ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿಲಾಗಿತ್ತು. ಈ ಸಂಬಂಧ ಜೂ.4ರಂದು ಶಾಸಕ ಎಂ.ರಘುನಂದನ್ ರಾವ್ ಸುದ್ದಿಗೋಷ್ಠಿ ನಡೆಸಿ ಸಂತ್ರಸ್ತ ಬಾಲಕಿಯ ಫೋಟೋ ಮತ್ತು ವಿಡಿಯೋ ಬಿಡುಗಡೆ ಮಾಡಿದ್ದರು.

ಎಐಎಂಐಎಂ ಶಾಸಕರೊಬ್ಬರ ಪುತ್ರ ಸಹ ಈ ಗ್ಯಾಂಗ್ ರೇಪ್ನಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿದ್ದರು. ಈ ಹೇಳಿಕೆಯನ್ನು ಸಾಬೀತುಪಡಿಸಲು ತಮ್ಮ ಬಳಿ ಹೆಚ್ಚಿನ ಸಾಕ್ಷಿಗಳಿವೆ ಎಂದು ಹೇಳಿದ್ದರು. ಬಳಿಕ ಅವುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಹೀಗಾಗಿ ಐಪಿಸಿ ಸೆಕ್ಷನ್ 228-ಎ ಅಡಿ ಶಾಸಕರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.